ಮಡಿಕೇರಿ : ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೊಡಗಿನ ಕುಲದೇವಿ ಕಾವೇರಿ ಸನ್ನಿಧಿಗೆ ತೆರಳಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದರು.
ಶುಕ್ರವಾರ ಮುಂಜಾನೆ ಭಾಗಮಂಡಲದ ಭಗಂಡೇಶ್ವರ ಸನ್ನಿಧಿಯಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ತೆರಳಿ ಪೂಜೆ ಸಲ್ಲಿಸಿದ ಯದುವೀರ್ ಒಡೆಯರ್ ಬಳಿಕ ತಲಕಾವೇರಿಯ ಕಾವೇರಿ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ಗೆಲುವಿಗಾಗಿ ಪ್ರಾರ್ಥಿಸಿದರು.
ಈ ಸಂದರ್ಭ ಮಾಜಿ ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸುಜಾ ಕುಶಾಲಪ್ಪ, ಕೊಡಗು ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.