ಕುಶಾಲನಗರ
ಅಂಗಡಿ ಮುಂಗಟ್ಟುಗಳು, ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ಕನ್ನಡದ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿದರು. ಕುಶಾಲನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಜೆ.ಅಣ್ಣಯ್ಯ ನೇತೃತ್ವದಲ್ಲಿ ಪ್ರತಿಭಟಿಸಿದ ಕಾರ್ಯಕರ್ತರು, ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕು. ಅನ್ಯಭಾಷೆ ನಾಮಫಲಕಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ಆಡಳಿತವನ್ನು ಆಗ್ರಹಿಸಿದರು. ಕಾರ್ಯಪ್ಪ ವೃತ್ತದಿಂದ ಪುರಸಭೆ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಕನ್ನಡ ವಿರೋಧಿಗಳ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭ ಮಾತನಾಡಿದ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ್, ಎಲ್ಲಾ ಅಂಗಡಿ ಮುಂಗಟ್ಟುಗಳು, ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ಕಡ್ಡಾಯವಾಗಿ ಕನ್ನಡದ ನಾಮಫಲಕಗಳನ್ನು ನಿಯಮಗಳ ಪ್ರಕಾರ ದೊಡ್ಡ ಅಕ್ಷರಗಳಲ್ಲಿ ಹಾಕಬೇಕು. ಈ ಬಗ್ಗೆ ಸ್ಥಳೀಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಬೈಟ್-
ತಾಲ್ಲೂಕು ಅಧ್ಯಕ್ಷ ಬಿ.ಜೆ.ಅಣ್ಣಯ್ಯ ಮಾತನಾಡಿ, ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಕೆ ಸಂಬAಧ ಎಲ್ಲ ವ್ಯಾಪಾರಿಗಳಿಗೆ, ಅಂಗಡಿ ಮುಂಗಟ್ಟುಗಳಿಗೆ ನೋಟಿಸ್ ನೀಡಬೇಕು ಎಂದರಲ್ಲದೇ, ಹೀಗೆ ಮುಂದುವರೆದರೆ ಪುರಸಭೆ ವಿರುದ್ದ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಬೈಟ್-
ಬಳಿಕ ಪುರಸಭೆ ಅಧಿಕಾರಿ ಉದಯಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ದಿನೇಶ್, ತಾಲ್ಲೂಕು ಘಟಕದ ಗೌರವಾಧ್ಯಕ್ಷ ವಿ.ಎಸ್.ರಾಜಶೇಖರ್, ಉಪಾಧ್ಯಕ್ಷರಾದ ಚಂದ್ರು, ನಾಸಿರ್ ಫಯಾಜುದ್ದೀನ್, ಕುಶಾಲನಗರ ತಾಲೂಕು ಘಟಕದ ಕಾರ್ಯದರ್ಶಿ ನವೀನ್, ಮುಖಂಡರಾದ ರೊನಾಲ್ಡೊ, ಧನರಾಜ್, ಗಣೇಶ್,ಆನಂದ, ಕುಮಾರ್, ಜಿಲ್ಲಾ ಸಂಚಾಲಕ ಬಿ.ವಿ.ರವಿ, ಮಹಿಳಾ ಘಟಕದ ರಾಜ್ಯ ಸಂಚಾಲಕಿ ದೀಪಾಪೂಜಾರಿ ಸೇರಿದಂತೆ ಮತ್ತೀತರರು ಪಾಲ್ಗೊಂಡಿದ್ದರು