Breaking News
   
   
   

ಮೈಸೂರಿಗೆ ಪ್ರತಿಭಟನೆಗೆ ತೆರಳುತ್ತಿದ್ದ ಬಿಜೆಪಿ ಮುಖಂಡರ ಬಂಧನ ಖಂಡಿಸಿ, ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ….

ಕೊಡಗು

news-details

ಮಡಿಕೇರಿ:ಮೂಡಾ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವುದು ಹಾಗೂ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಮೈಸೂರಿಗೆ ಪ್ರತಿಭಟನೆಗಾಗಿ ತೆರಳುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಹಲವು ಶಾಸಕರನ್ನು ಬಂಧಿಸಿರುವುದನ್ನು ಖಂಡಿಸಿ, ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.  ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ನೇತೃತ್ವದಲ್ಲಿ ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಜಮಾಯಿಸಿದ ಬಿಜೆಪಿ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಷ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಮಾಜೀ ಶಾಸಕ ಕೆ.ಜಿ. ಬೋಪಯ್ಯ,  ಕಾಂಗ್ರೆಸ್ ಭಷ್ಟಾಚಾರವನ್ನು ಬಯಲಿಗೆಳೆಯಲು ಮೈಸೂರಿಗೆ ಹೊರಟಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ಸಹಿತ ಹಲವಾರು ಶಾಸಕರನ್ನು ಸರಕಾರ ಪೊಲೀಸರನ್ನು ಮುಂದಿಟ್ಟು ಬಂಧಿಸಿದೆ. ಆ ಮೂಲಕ ಕಾಂಗ್ರೆಸ್ ಸರಕಾರ ವಿರೋಧ ಪಕ್ಷದ ಹೋರಾಟವನ್ನೇ ಹತ್ತಿಕ್ಕಲು ಪ್ರಯತ್ನಿಸಿರುವ ಕ್ರಮವನ್ನು ತೀವ್ರವಾಗಿ ಖಂಡಿಸುವುದಾಗಿ ಹೇಳಿದರು. ಮೂಡಾ ಮತ್ತು ವಾಲ್ಮಿಕಿ ನಿಗಮದ ಹಗರಣಗಳಲ್ಲಿ ಮುಖ್ಯಮಂತ್ರಿಗಳೇ ಶಾಮೀಲಾಗಿದ್ದಾರೆ ಎಂದು ಬೋಪಯ್ಯ ಆರೋಪಿಸಿದರು. 

ಪ್ರತಿಭಟನೆಯಲ್ಲಿ ಬಿಜೆಪಿ ಪಕ್ಷದ ಪ್ರಮುಖರಾದ ಮಹೇಶ್ ಜೈನಿ, ನೆಲ್ಲಿರ ಚಲನ್, ಬಿ.ಕೆ. ಅರುಣ್ ಕುಮಾರ್, ಸುಬ್ರಮಣ್ಯ ಉಪಾಧ್ಯಾಯ, ಕನ್ನಂಡ ಸಂಪತ್, ಡೀನ್ ಬೋಪಣ್ಣ, ಅರುಣ್ ಶೆಟ್ಟಿ, ಬೆಪ್ಪುರನ ಮೇದಪ್ಪ, ಮನು ಮಂಜುನಾಥ್, ಪಾಂಡೀರ ಪೂಣಚ್ಚ, ಅನಿತಾ ಪೂವಯ್ಯ, ಚಿತ್ರಾವತಿ, ಸೌಮ್ಯ ಸುನಿಲ್ ಮತ್ತಿತ್ತರರು ಪಾಲ್ಗೊಂಡಿದ್ದರು.
 

news-details