Breaking News
   
   
   

ಕಳೆದ ಆರು ತಿಂಗಳ ಹಿಂದೆ ಮೃತಪಟ್ಟ ಎಂಜಿನಿಯರ್ ಗೆ ಮಡಿಕೇರಿ ನಗರಸಭೆಗೆ ವರ್ಗಾವಣೆ…!- ಚರ್ಚೆಗೆ ಗ್ರಾಸವಾದ ನಗರಾಭಿವೃದ್ಧಿ ಇಲಾಖೆಯ ಎಡವಟ್ಟು

ಕೊಡಗು

news-details

ಮಡಿಕೇರಿ:ಮೃತ ಎಂಜಿನಿಯರ್ ಒಬ್ಬರಿಗೆ  ವರ್ಗಾವಣೆ ಮಾಡುವ ಮೂಲಕ ನಗರಾಭಿವೃದ್ಧಿ ಇಲಾಖೆ ಎಡವಟ್ಟು ಮಾಡಿಕೊಂಡಿದೆ. ನಗರಾಭಿವೃದ್ಧಿ ಇಲಾಖೆಯು ಕಿರಿಯ ಎಂಜಿನಿಯರ್ ಅಶೋಕ ಪುಟಪಾಕ್ ಅವರನ್ನು ಸೇಡಂ ಪುರಸಭೆಯಿಂದ ಮಡಿಕೇರಿ ನಗರಸಭೆಯ ಕಿರಿಯ ಎಂಜಿನಿಯರ್ ಹುದ್ದೆಗೆ ವರ್ಗಾವಣೆ ಮಾಡಿ  ರಾಜ್ಯ ಸರ್ಕಾರ ಜುಲೈ 9ರಂದು ಆದೇಶ ಹೊರಡಿಸಿದೆ.  ಆದರೆ  ನಗರಾಭಿವೃದ್ಧಿ ಇಲಾಖೆಯ ಕಿರಿಯ ಎಂಜಿನಿಯರ್ ಅಶೋಕ ಪುಟಪಾಕ್ ಅವರು ಕಳೆದ ಆರು ತಿಂಗಳ ಹಿಂದೆಯೇ ಮೃತಪಟ್ಟಿದ್ದಾರೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ದಿಗ್ಗಾಂವ ಗ್ರಾಮದ ಅಶೋಕ ಭೀಮರಾಯ ಪುಟಪಾಕ್ ಎಂಬುವರು  ಸೇಡಂ ಪುರಸಭೆಯಲ್ಲಿ ಕಿರಿಯ ಎಂಜಿನಿಯರ್ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ತೀವ್ರ ಅನಾರೋಗ್ಯದ ಕಾರಣ ಅವರು ಸೇಡಂನಲ್ಲಿ ಜನವರಿ 12ರಂದು ಮೃತಪಟ್ಟಿದ್ದರು. ಜನವರಿ.13ರಂದು ದಿಗ್ಗಾಂವ ಗ್ರಾಮದಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ಚಿತ್ತಾಪುರ, ವಾಡಿ, ಸೇಡಂ ಪುರಸಭೆಯ ಅಧಿಕಾರಿ, ಸಿಬ್ಬಂದಿ ಪಾಲ್ಗೊಂಡಿದ್ದರು. ಇಲಾಖೆಯ ನೌಕರರೊಬ್ಬರು ಮೃತಪಟ್ಟಿರುವ ಬಗ್ಗೆ ಪೌರಾಡಳಿತ ವಿಭಾಗಕ್ಕೆ ಮಾಹಿತಿ ಇರಲಿಲ್ಲವೇ? ಒಂದು ವೇಳೆ ಮೃತಪಡುವ ಮುಂಚೆ ಅಶೋಕ ಅವರು ವರ್ಗಾವಣೆ ಕೋರಿದ್ದರೆ, ಅವರ ಮರಣದ ನಂತರ ವರ್ಗಾವಣೆ ಕಡತ ಮರು ಪರಿಶೀಲನೆ ಮಾಡದೇ ವರ್ಗಾವಣೆ ಮಾಡಲಾಗಿದೆಯೇ ಎಂಬ  ವಿಷಯ ಚರ್ಚೆಗೆ ಗ್ರಾಸವಾಗಿದೆ.  

news-details