Breaking News
   
   
   

ನಾಪೋಕ್ಲು ವ್ಯಾಪ್ತಿಯಲ್ಲಿ ಧಾರಾಕಾರ ಮಳೆ. ಮೈದುಂಬಿ ಹರಿಯುತ್ತಿರುವ ಕಾವೇರಿ ನದಿ 

ಕೊಡಗು

news-details

ನಾಪೋಕ್ಲು ವ್ಯಾಪ್ತಿಯಲ್ಲಿ ಧಾರಾಕಾರ ಮಳೆ. ಮೈದುಂಬಿ ಹರಿಯುತ್ತಿರುವ ಕಾವೇರಿ ನದಿ 
 ನಾಪೋಕ್ಲು -ಮೂರ್ನಾಡು ರಸ್ತೆ ಸಂಪರ್ಕ ಬಂದ್ 
 
ನಾಪೋಕ್ಲು -ಮೂರ್ನಾಡು ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಬೊಳಿಬಾಣೆಯಲ್ಲಿ 4ಅಡಿಯಷ್ಟು ರಸ್ತೆಗೆ ಬಂದ ಕಾವೇರಿ ನದಿ ಪ್ರವಾಹ. ವಾಹನ ಸಂಚಾರ ಸ್ಥಗಿತ.
 
ಸುರಿಯುತ್ತಿರುವ ಧಾರಾಕಾರ ಮಳೆ.

ಚೆರಿಯಪರಂಬು ಕಲ್ಲುಮೊಟ್ಟೆ ಸಂಪರ್ಕರಸ್ತೆ, ನಾಪೋಕ್ಲು -ಬಲಮುರಿ ಮಾರ್ಗದ ಮಕ್ಕಿಕಡವು ರಸ್ತೆ ಜಾಲಾವೃತಗೊಂಡು ಸಂಚಾರ ಸಂಪೂರ್ಣ ಸ್ಥಗಿತ.

ನಾಪೋಕ್ಲು ಕೊಟ್ಟಮುಡಿ, ಕೇಮಾಟ್, ಕುಯ್ಯಂಗೇರಿ ಹೊದ್ದೂರು ಮಾರ್ಗವಾಗಿ ಮೂರ್ನಾಡಿಗೆ ಸಂಚರಿಸುತ್ತಿರುವ ವಾಹನಗಳು. 

ನಾಪೋಕ್ಲು -ಕೊಟ್ಟಮುಡಿ ಬೆಟ್ಟಗೇರಿ ಮಡಿಕೇರಿ ರಸ್ತೆ ಸಂಚಾರಕ್ಕೆ ಮುಕ್ತವಾಗಿದೆ.

ನಾಪೋಕ್ಲು ಕೈಕಾಡು,ಪಾರಾಣೆ ರಸ್ತೆಯಲ್ಲಿ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ.

 ಮಳೆ ಅಬ್ಬರ ಇದೇ ರೀತಿ ಮುಂದುವರೆದರೆ ನಾಪೋಕ್ಲು-ಕೊಟ್ಟಮುಡಿ  ಸಂಪರ್ಕ ರಸ್ತೆ ಸೇರಿದಂತೆ ನಾಪೋಕ್ಲು ವ್ಯಾಪ್ತಿಯ  ಎಲ್ಲಾ ಪ್ರಮುಖ ರಸ್ತೆಗಳ ಸಂಚಾರ  ಖಡಿತಗೊಳ್ಳುವ ಸಾಧ್ಯತೆ ಇದೆ.
 
 ನಾಪೋಕ್ಲುವಿನಲ್ಲಿ ಧಾರಾಕಾರ ಮಳೆಯಿಂದ ಸಾಮಾನ್ಯ  ಜನ ಜೀವನ .ವ್ಯತ್ಯಯವಾಗಿದೆ. ಚೆರಿಯಪರಂಬು ಸೇರಿದಂತೆ ನದಿ ದಡದಲ್ಲಿ ವಾಸಿಸುವ ಜನರಿಗೆ ಪ್ರವಾಹದ ಭೀತಿ ಎದುರಾಗಿದೆ.

news-details