Breaking News
   
   
   

ಅಪಘಾತ ದುರಂತದಲ್ಲಿ ಮೃತಪಟ್ಟ ಯುವಕನ ಮನೆಗೆ ಶಾಸಕ ಡಾ. ಮಂತರ್ ಗೌಡ ಭೇಟಿ :

ಕೊಡಗು

news-details


ಅಪಘಾತ ದುರಂತದಲ್ಲಿ ಮೃತಪಟ್ಟ ಯುವಕನ ಮನೆಗೆ ಶಾಸಕ ಡಾ. ಮಂತರ್ ಗೌಡ ಭೇಟಿ :

ಕಳೆದೆರಡು ದಿನಗಳ ಹಿಂದೆ ನಿಯಂತ್ರಣ ಕಳೆದುಕೊಂಡ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ಸುಂಟಿಕೊಪ್ಪ ಸಮೀಪದ ಕೊಡಗರಹಳ್ಳಿ ಮಾರುತಿ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿತ್ತು. ಮೊದಲು ಲಾರಿಗೆ ಡಿಕ್ಕಿ ಹೊಡೆದಿರುವ ಬೈಕ್ ನಂತರ ರಸ್ತೆ ಬದಿಯ ಮೋರಿಗೆ  ಅಪ್ಪಳಿಸಿ ಈ ದುರಂತ ಸಂಭವಿಸಿತು ಎಂದು ತನಿಖೆಯಲ್ಲಿ ತಿಳಿದು ಬಂದಿತ್ತು.

ಈ ಅಪಘಾತ ದಲ್ಲಿ ಮೃತ ಪಟ್ಟ ಯುವಕನ ಮನೆಗೆ ಮಡಿಕೇರಿ ಶಾಸಕರಾದ ಡಾ. ಮಂತರ್ ಗೌಡ ಅವರು ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ತಿಳಿಸಿದರು. ( ಅಪಘಾತ ನಡೆದ ಸಂಧರ್ಭ ಶಾಸಕರು ವಿಧಾನಸಭಾ ಅಧಿವೇಶನದಲ್ಲಿದ್ದರಿಂದ ಭೇಟಿ ನೀಡಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ನೆನ್ನೆ ತುರ್ತಾಗಿ ಭೇಟಿ ನೀಡಿದರು. )  ನಂತರ ಅವರು ಆ ಸಂತ್ರಸ್ತ ಕುಟುಂಬಕ್ಕೆ ಮುಂದಿನ ದಿನಗಳಲ್ಲಿ ಸರ್ಕಾರದಿಂದ ತಮ್ಮ ಕುಟುಂಬಕ್ಕೆ ಅಗತ್ಯವಿರುವ ಸಹಾಕರವನ್ನು ನೀಡುವುದಾಗಿ ಭರವಸೆ ನೀಡಿದರು.

ಈ ಸಂಧರ್ಭ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿ.ಪಿ ಶಶಿಧರ್, ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶಿವಮ್ಮ, ಪ್ರಮುಖರಾದ ಅಬ್ದುಲ್ ಲತೀಫ್, ರಫೀಕ್ ಖಾನ್, ಅನೂಪ್, ವೆಂಕಪ್ಪ ಕೊಟಿಯನ್, ಶಬೀರ್, ಹರ್ಷಾದ್, ರಂಜನ್,  ಸುರೇಶ್ ಹಾಗೂ ಗ್ರಾಮಸ್ಥರು ಆಜರಿದ್ದರು.
 

news-details