ಕುಶಾಲನಗರ ವ್ಯಾಪ್ತಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಶಾಸಕ ಡಾ. ಮಂತರ್ ಗೌಡ ಭೇಟಿ
ವಿಧಾನಮಂಡಲ ಅಧಿವೇಶನ ಮುಗಿಸಿದ ಕೂಡಲೇ ಮಡಿಕೇರಿ ಕ್ಷ ಶಾಸಕ ಡಾಕ್ಟರ್ ಮಂತ್ರ ಗೌಡ ನೇರವಾಗಿ ಕುಶಾಲನಗರ ಪುರಸಭೆ ವ್ಯಾಪ್ತಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳೀಯ ನಿವಾಸಿಗಳ ಹಾಗೂ ಸಂತ್ರಸ್ತರ ಜೊತೆಯಲ್ಲಿ ಚರ್ಚಿಸಿ ಅವರುಗಳಿಗೆ ಧೈರ್ಯ ತುಂಬಿದರು.
ಹಾಗೂ ಅವರಿಗೆ ಅತ್ಯಗತ್ಯವಾಗಿ ಬೇಕಾದ ಮೂಲಭೂತ ಸೌಕರ್ಯಗಳನ್ನು ಹಾಗೂ ತಾತ್ಕಾಲಿಕವಾಗಿ ವಾಸಿಸಲು ಬೇಕಾದ ವ್ಯೆವಸ್ಥೆ, ಆಹಾರ ಪದಾರ್ಥಗಳನ್ನು ಪೂರೈಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂಧರ್ಭ ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ, ಡಿವೈಎಸ್ಪಿ ಗಂಗಾಧರಪ್ಪ, ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಪ್ರಸಾದ್, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು ಆದ ವಿ.ಪಿ ಶಶಿಧರ್, ಕೂಡ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಕೆಪಿಸಿಸಿ ಸದಸ್ಯರಾದ ಮಂಜುನಾಥ್ ಗುಂಡೂರಾವ್ ಹಾಗೂ ಪ್ರಮುಖರು, ಪೋಲೀಸ್ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.