ಕೇಂದ್ರ ಬಜೆಟ್-2024-25ನೇ ಸಾಲಿನ ಆಯವ್ಯಯ ಮಂಡನೆ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 3.0 ಸರ್ಕಾರದ ಮೊದಲ ಬಜೆಟ್ ನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ ನಲ್ಲಿ 7 ನೆಯ ಸಲ ಮಂಡಿಸುವ ಮೂಲಕ ದಾಖಲೆ ಮಾಡಿದ್ದಾರೆ.
ಲೋಕಸಭೆಯಲ್ಲಿ ಬಜೆಟ್ ಭಾಷಣ ಆರಂಭಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಮೂರನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾರಿರುವ ನರೇಂದ್ರ ಮೋದಿಯವರಿಗೆ ಅಭಿನಂದನೆಗಳನ್ನು ತಿಳಿಸಿದರು.
ಭಾರತದ ಆರ್ಥಿಕತೆ ಅಭಿವೃದ್ಧಿಯಾಗಿದೆ. ಪ್ರಧಾನಿ ಮೋದಿ ಆಡಳಿತದಲ್ಲಿ ಅರ್ಥವ್ಯವಸ್ಥೆಗೆ ಶರವೇಗ ಸಿಕ್ಕಿದೆ ಎಂದು ಹೇಳಿದರು.
ಮುಖ್ಯಾಂಶಗಳು:
ಬಂಗಾರ ಪ್ರಿಯರಿಗೆ ಕೊನೆಗೂ ಗುಡ್‌ನ್ಯೂಸ್
ಕೇಂದ್ರ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಚಿನ್ನ ಬೆಳ್ಳಿಯ ಮೇಲಿನ ದರವನ್ನು ಇಳಿಕೆ ಮಾಡಿ ಘೋಷಿಸಿದ್ದಾರೆ. ಅಂದರೆ ಚಿನ್ನ ಮತ್ತು ಬೆಳ್ಳಿ ಮೇಲಿನ ಕಸ್ಟಮ್ಸ್ ಸುಂಕವನ್ನು ಕಡಿಮೆ ಮಾಡಲಾಗಿದ್ದು, ಈ ಹಿನ್ನೆಲೆ ಬಂಗಾರ ಬೆಳ್ಳಿಯ ದರ ಕಡಿಮೆಯಾಗಲಿದೆ.
ಆದಾಯ ತೆರಿಗೆಗೆ ಸಂಬಂಧಿಸಿದ ಮಹತ್ವದ ಘೋಷಣೆ
ಬಜೆಟ್ ಭಾಷಣದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ .ಆದಾಯ ತೆರಿಗೆಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದ್ದಾರೆ.
ಬಜೆಟ್ ನಲ್ಲಿ ಮಧ್ಯಮ ವರ್ಗದವರಿಗೆ ಸರ್ಕಾರ ಉಡುಗೊರೆ ನೀಡಿದೆ.
ಹೊಸ ತೆರಿಗೆ ಪದ್ಧತಿಯಲ್ಲಿ ಸ್ಟ್ಯಾಂಡರ್ಡ್ ಡಿಡಕ್ಷನ್ ಅನ್ನು 50 ಸಾವಿರದಿಂದ 75000 ರೂ.ಗೆ ಹೆಚ್ಚಿಸಲಾಗಿದೆ.
ಕೃಷಿ ಕ್ಷೇತ್ರಕ್ಕೆ 1.5 ಲಕ್ಷ ಕೋಟಿ ರೂ.ಘೋಷಣೆ
ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್
ವರ್ಷದಲ್ಲಿ 1ಕೋಟಿ ರೈತರು ನೈಸರ್ಗಿಕ ಕೃಷಿ ವ್ಯಾಪ್ತಿಗೆ
ಶಿಕ್ಷಣ, ಕೌಶಲ್ಯ, ಉಡ್ಯೋಗ ಅಭಿವೃದ್ಧಿಗಾಗಿ 1.48 ಲಕ್ಷ ಕೋಟಿ ಮೀಸಲು
ಮೊದಲಬಾರಿ ಉದ್ಯೋಗ ಮಾಡುವವರಿಗೆ ಒಂದು ತಿಂಗಳು ಸರ್ಕಾರದಿಂದಲೇ ಸಂಬಳ
ಉನ್ನತ ಶಿಕ್ಷಣಕ್ಕೆ ಸರ್ಕಾರದಿಂದ 10 ಲಕ್ಷದವರೆಗೆ ಸಾಲ ಸೌಲಭ್ಯ
5 ವರ್ಷಗಳಲ್ಲಿ 4.1 ಕೋಟಿ ಯುವಜನತೆಗೆ ಉದ್ಯೋಗ ಯೋಜನೆ
5 ವರ್ಷಗಳಲ್ಲಿ ಟಾಪ್-500 ಕಂಪನಿಗಳಲ್ಲಿ ಒಂದು ಕೋಟಿ ಯುವಜನತೆಗೆ ಇಂಟರ್ನ್ ಶಿಪ್ ಅವಕಾಶ
ಹೈದರಾಬಾದ್-
ಬೆಂಗಳೂರು ಕೈಗಾರಿಕಾ ಕಾರಿಡಾರ್ ನಿರ್ಮಾಣ
ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ರೂ.
ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಮನೆಗಳ ನಿರ್ಮಾಣ
ಆಂಧ್ರಪ್ರದೇಶಕ್ಕೆ 15,000 ಕೋಟಿ ಆರ್ಥಿಕ ನೆರವು ಘೋಷಣೆ.
ಲೋಕಸಭೆಯಲ್ಲಿ ಬಜೆಟ್ ಮಂಡನೆ ಮಾಡುತ್ತಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೌಶಲಾಭಿವೃದ್ಧಿ ಹಾಗೂ ಉದ್ಯೋಗಕ್ಕೆ ಸರ್ಕಾರ ಹೆಚ್ಚು ಒತ್ತು ನೀಡಲಿದ್ದು, ಮೊದಲ ಬಾರಿ ಉದ್ಯೋಗ ಮಾಡುವವರಿಗೆ ಸರ್ಕಾರದಿಂದ ಸಹಾಯ ದೊರೆಯಲಿದೆ.
ಔಪಚಾರಿಕ ವಲಯದಲ್ಲಿ ಮೊದಲ ಬಾರಿಗೆ ಉದ್ಯೋಗ ಆರಂಭಿಸುವವರಿಗೆ ಒಂದು ತಿಂಗಳ ವೇತನವನ್ನು ಸರ್ಕಾರದಿಂದ ನೀಡಲಾಗುವುದು ಎಂದು ಘೋಷಿಸಿದರು.
ಈ ವೇತನವನ್ನು ನೇರ ನಗದು ವರ್ಗಾವಣೆ ಮೂಲಕ ಮೂರು ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು.
ಇದರ ಗರಿಷ್ಠ ಮೊತ್ತ 15,000 ರೂ. ಇಪಿಎಫ್ ಒ ನಲ್ಲಿ ನೋಂದಾಯಿಸಲ್ಪಟ್ಟವರು ಈ ಭತ್ಯೆ ಪಡೆಯುತ್ತಾರೆ. ಇದರಿಂದ 2.10 ಕೋಟಿ ಯುವಕರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.
ಐದು ಕೋಟಿ ಆದಿವಾಸಿಗಳಿಗೆ ಸುಧಾರಿತ ಗ್ರಾಮ ಅಭಿಯಾನ
ಬುಡಕಟ್ಟು ಸಮುದಾಯಗಳ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಪ್ರಧಾನ ಮಂತ್ರಿ ಬುಡಕಟ್ಟು ಉನ್ನತ ಗ್ರಾಮ ಅಭಿಯಾನವನ್ನು ಪ್ರಾರಂಭಿಸಲಾಗುವುದು. ಬುಡಕಟ್ಟು ಪ್ರಾಬಲ್ಯದ ಹಳ್ಳಿಗಳು ಮತ್ತು ಮಹತ್ವಾಕಾಂಕ್ಷೆಯ ಜಿಲ್ಲೆಗಳಲ್ಲಿ ಬುಡಕಟ್ಟು ಕುಟುಂಬಗಳಿಗೆ ಈ ಯೋಜನೆಯು ಸ್ಯಾಚುರೇಶನ್ ವ್ಯಾಪ್ತಿಯನ್ನು ಸಾಧಿಸುತ್ತದೆ. ಇದರಿಂದ 63,000 ಗ್ರಾಮಗಳು ವ್ಯಾಪ್ತಿಗೆ ಬರಲಿದ್ದು, 5 ಕೋಟಿ ಬುಡಕಟ್ಟು ಜನರಿಗೆ ಅನುಕೂಲವಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.
ಮುದ್ರಾ ಸಾಲದ ಮಿತಿಯನ್ನು 10 ಲಕ್ಷದಿಂದ 20 ಲಕ್ಷಕ್ಕೆ ಏರಿಕೆ
ಬಜೆಟ್‌ನಲ್ಲಿ ಎಂಎಸ್‌ಎಂಇಗಳು ಮತ್ತು ಉತ್ಪಾದನೆಗೆ ವಿಶೇಷ ಗಮನ ನೀಡಲಾಗಿದೆ. MSMEಗಳು ತಮ್ಮ ಒತ್ತಡದ ಅವಧಿಯಲ್ಲಿ ಬ್ಯಾಂಕ್ ಸಾಲವನ್ನು ಮುಂದುವರಿಸಲು ಅನುಕೂಲವಾಗುವಂತೆ ಬಜೆಟ್‌ನಲ್ಲಿ ಹೊಸ ವ್ಯವಸ್ಥೆಗಳನ್ನು ಘೋಷಿಸಲಾಗಿದೆ. ಅಲ್ಲದೇ ಮುದ್ರಾ ಸಾಲದ ಮಿತಿಯನ್ನು 10 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಿಸಲಾಗಿದೆ.
ಮೊಬೈಲ್ ಫೋನ್ ಚಾರ್ಜರ್‌ಗಳು ಅಗ್ಗ!
ಇನ್ಮುಂದೆ ಮೊಬೈಲ್ ಫೋನ್ ಚಾರ್ಜರ್ ಅಗ್ಗವಾಗಲಿದೆ. ಇದಲ್ಲದೇ ವಿದ್ಯುತ್ ತಂತಿಗಳು ಮತ್ತು ಎಕ್ಸ್ ರೇ ಯಂತ್ರಗಳು ಅಗ್ಗವಾಗಲಿದೆ. ಮೂರು ಕ್ಯಾನ್ಸರ್ ಔಷಧಿಗಳ ಮೇಲಿನ ಕಸ್ಟಮ್ ಸುಂಕವನ್ನು ಕಡಿಮೆ ಮಾಡಲಾಗಿದೆ.
ಆದಾಯ ತೆರಿಗೆ ವಾರ್ಷಿಕ ಮೂರು ಲಕ್ಷದವರೆಗೆ ಯಾವುದೇ ತೆರಿಗೆ ಇಲ್ಲ, ಮೂರರಿಂದ 7 ಲಕ್ಷದವರೆಗೆ ಶೇಕಡ 5 ಏಳರಿಂದ ಹತ್ತು ಲಕ್ಷದವರೆಗೆ ಶೇಕಡ 15ರಷ್ಟು ತೆರಿಗೆ ಹತ್ತು ಲಕ್ಷ ಮೇಲ್ಪಟ್ಟವರು ಶೇಕಡ 30ರಷ್ಟು ಆದಾಯ ತೆರಿಗೆ ಕಟ್ಟಬೇಕು