Breaking News
   
   
   

*ಪಾಲೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾದ ಬೊಲೆರೋ ಜೀಪ್ -ಚಾಲಕ ಪಾರು*

ಕೊಡಗು

news-details

 

*TV 1NEWS UPDATE*

*ಪಾಲೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾದ ಬೊಲೆರೋ ಜೀಪ್ -ಚಾಲಕ ಪಾರು*

 

ವರದಿ :ಝಕರಿಯ ನಾಪೋಕ್ಲು

 

ನಾಪೋಕ್ಲು : ಚಾಲಕನ ನಿಯಂತ್ರಣ ತಪ್ಪಿದ ಬೊಲೆರೋ ಜೀಪೊಂದು ರಸ್ತೆಯಲ್ಲಿ ಪಲ್ಟಿಯಾದ ಘಟನೆ ನಾಪೋಕ್ಲು ಮಡಿಕೇರಿ ಮುಖ್ಯ ರಸ್ತೆಯ ಪಾಲೂರು ಗ್ರಾಮದಲ್ಲಿ ನಡೆದಿದೆ.

 

ನಾಪೋಕ್ಲು ಕಡೆಯಿಂದ ಮಡಿಕೇರಿ ಕಡೆಗೆ ಕಕ್ಕಬ್ಬೆ ಗ್ರಾಮದ ರವಿಕುಮಾರ್ ಎಂಬುವರು ಚಲಾಯಿಸುತ್ತಿದ್ದ ಬೊಲೆರೋ ಜೀಪ್  ಪಾಲೂರು ಗ್ರಾಮದ ರಸ್ತೆಯ ಇಳಿಜಾರಿನಲ್ಲಿ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಅಪಘಾತದಿಂದ ಬೊಲೆರೋ ವಾಹನಕ್ಕೆ ಹನಿಯಾಗಿದ್ದು,ಚಾಲಕ ರವಿ ಕುಮಾರ್ ಸಣ್ಣಪುಟ್ಟ ಗಾಯಗಳಾಗಿ ಅದೃಷ್ಟ ವಷಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಇದರಿಂದ ಕೆಲಕಾಲ ವಾಹನ ಸಂಚಾರಕ್ಕೆ ಆಡಚಣೆ ಉಂಟಾಗಿತ್ತು. ಸ್ಥಳಕ್ಕೆ ಧಾವಿಸಿದ ನಾಪೋಕ್ಲು ಪೊಲೀಸರು ಸಾರ್ವಜನಿಕರ ಸಹಕಾರದಿಂದ ರಸ್ತೆಯಲ್ಲಿದ್ದ ವಾಹನವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದರು.

*TV 1NEWS UPDATE*

news-details