ದುಬಾರೆಯಿಂದ ದಸರಾಗೆ ಸಾಕಾನೆಗಳ ಪಯಣ
ಮೈಸೂರು ದಸಾರದಲ್ಲಿ ಪಾಲ್ಗೊಳ್ಳಲು ಮೊದಲ ಹಂತದಲ್ಲಿ ದುಬಾರೆ ಸಾಕಾನೆ ಶಿಬಿರದಿಂದ ಧನಂಜಯ, ಗೋಪಿ, ಕಂಜನ್ ಪ್ರಯಾಣ ಬೆಳೆಸಿತು.
ಆನೆಗಳಿಗೆ ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿ ಲಾರಿ ಮೂಲಕ ಕಳುಹಿಸಿಕೊಡಲಾಯಿತು.
ಈ ಸಂದರ್ಭ ವಲಯ ಅರಣ್ಯಾಧಿಕಾರಿ ರತನ್ ಕುಮಾರ್ ಮತ್ತು ಸಿಬ್ಬಂದಿಗಳು ಇದ್ದರು.