Breaking News
   
   
   

ಸಾರಿಗೆ ಬಸ್ ಡಿಪೋ ಕಾಮಗಾರಿ ವೀಕ್ಷಿಸಿದ ರಾಜ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ……

ರಾಜಕೀಯ

news-details

ಕುಶಾಲನಗರ: ರಾಜ್ಯ ಸರಕಾರ ಶೇಕಡ  100 ರಷ್ಟು ಸುಭ್ರದವಾಗಿದ್ದು, ಯಾವುದೇ ರೀತಿಯ ಗೊಂದಲ ಬೇಡ ಎಂದು ರಾಜ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಕುಶಾಲನಗರ ತಾಲೂಕಿನ ಗುಡ್ಡೆಹೊಸೂರು ಗ್ರಾಮ ಪಂಚಾಯ್ತಿ  ವ್ಯಾಪ್ತಿಯ ಬಸವನಹಳ್ಳಿ ಬಳಿ ನಿರ್ಮಾಣ ಹಂತದಲ್ಲಿರುವ ಸಾರಿಗೆ ಬಸ್ ಡಿಪೋ ಕಾಮಗಾರಿಯನ್ನು ರಾಜ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ವೀಕ್ಷಣೆ ಮಾಡಿದರು. ಇದೇ ಸಂದರ್ಭ ನಿಗದಿತ ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ನಿರ್ವಹಿಸುವಂತೆ ಸಚಿವರು ಗುತ್ತಿಗೆದಾರರಿಗೆ ಸೂಚಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,  ಮಾಜಿ ಮುಖ್ಯಮಂತ್ರಿ ಗುಂಡುರಾಯರ ಅವಧಿಯಲ್ಲಿ ಕುಶಾಲನಗರದಲ್ಲಿ ಸಾರಿಗೆ ನಿಲ್ದಾಣ ಸ್ಥಾಪಿಸಲಾಗಿತ್ತು. ನಂತರದ ದಿನಗಳಲ್ಲಿ ಡಿಪೋ ಸ್ಥಾಪನೆಗೆ ಪ್ರಮುಖ ಬೇಡಿಕೆ ವ್ಯಕ್ತಗೊಂಡಿತ್ತು. ಈ ಹಿನ್ನಲೆಯಲ್ಲಿ ಬಸವನಹಳ್ಳಿಯಲ್ಲಿ 4 ಎಕರೆ ಪ್ರದೇಶದಲ್ಲಿ 8 ಕೋಟಿ ವೆಚ್ಚದಲ್ಲಿ ಡಿಪೋ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಮಾರ್ಚ್ ನಲ್ಲಿ ಲೋಕಾರ್ಪಣೆಗೊಳಿಸಲಾಗುವುದು ಎಂದು ತಿಳಿಸಿದರು. ಸಾರಿಗೆ ಸಂಸ್ಥೆ ಲಾಭ ಗಳಿಸುತ್ತಿದೆಯೋ ಇಲ್ಲವೋ ಎಂಬುದು ಮುಖ್ಯವಲ್ಲ. ರಾಜ್ಯದ ಜನತೆಗೆ ಉತ್ತಮ ಸೇವೆ ಒದಗಿಸುವುದು ನಮ್ಮ ಮುಖ್ಯ ಗುರಿ, ಗ್ಯಾರೆಂಟಿ ಯೋಜನೆಗಳು ಮುಂದಿನ 10 ವರ್ಷಗಳು ಕೂಡ ನಿರಾತಂಕವಾಗಿ ಮುಂದುವರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶನಿವಾರಸಂತೆ:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗದಿಂದ ಶನಿವಾರಸಂತೆ ಪ್ರವಾಸಿ ಮಂದಿರ ಬಳಿ ಸುಮಾರು 1.70 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ರಸ್ತೆ ಸಾರಿಗೆ ಬಸ್ ನಿಲ್ದಾಣದ ಕಾಮಗಾರಿಗೆ ರಾಜ್ಯ ಸಾರಿಗೆ ಮತ್ತು ಮುಜರಾಯ ಖಾತೆ ಸಚಿವರಾದ  ಬಿ.ರಾಮಲಿಂಗಾರೆಡ್ಡಿ ಅವರು ಶಿಲಾನ್ಯಾಸ ನೆರವೇರಿಸಿದರು. ಬಳಿಕ ಸ್ಥಳೀಯ  ನಂದೀಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿತ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ ಅವರು,  ರಾಜ್ಯ ಸರಕಾರದ ಜನಪ್ರಿಯ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಮೂಲಕ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸುತ್ತಿದ್ದು ರಾಜ್ಯದಲ್ಲಿ ಪ್ರತಿದಿನ 1 ಕೋಟಿ ರಾಜ್ಯ ರಸ್ತೆ ಸಾರಿಗೆ ಬಸ್ಸುಗಳು ಸಂಚರಿಸುತ್ತಿದ್ದು ಹೆಚ್ಚುವರಿಯಾಗಿ ಇನ್ನೂ 4 ಸಾವಿರ ನೂತನ ಬಸ್ ಸಂಚಾರಕ್ಕೆ ಬೇಡಿಕೆ ಮೇರೆ ಹಂತಹAತವಾಗಿ ನೂತನ ಬಸ್ಸುಗಳನ್ನು ಬಿಡಲಾಗುತ್ತಿದೆ ಎಂದರು. ರಾಜ್ಯದಲ್ಲಿ ಹೆಚ್ಚುವರಿಯಾಗಿ 840 ನೂತನ ಬಸ್ ನಿಲ್ದಾಣಗಳನ್ನು ನಿರ್ಮಿಸಿದ್ದು,  ಶನಿವಾರಸಂತೆಯಲ್ಲಿ ನೂತನ ರಸ್ತೆ ಸಾರಿಗೆ ಬಸ್ಸು ನಿಲ್ದಾಣ ನಿರ್ಮಾಣಕ್ಕೆ ಸರಕಾರ 1.70 ಕೋಟಿ ಅನುದಾನ ನೀಡಿದ್ದು ಇದರ ಕಾಮಗಾರಿ 9 ತಿಂಗಳ ಒಳಗಡೆ ಪೂರ್ಣಗೊಳಿಸುವಂತೆ  ಗುತ್ತಿಗೆದಾರರಿಗೆ ಮತ್ತು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಕೊಡ್ಲಿಪೇಟೆ:ಕಾAಗ್ರೆಸ್ ರಾಜ್ಯ ಮುಖಂಡರು ಉಚ್ಚ ನ್ಯಾಯಾಲಯದ ಹಿರಿಯ ವಕೀಲರಾದ ಹೆಚ್.ಎಸ್.ಚಂದ್ರಮೌಳಿ ಅವರ ಅದ್ಯಕ್ಷತೆಯ ಕೊಡ್ಲಿಪೇಟೆ ವಿದ್ಯಾಸಂಸ್ಥೆಗೆ ರಾಜ್ಯ ಸಾರಿಗೆ ಮತ್ತು ಮುಜರಾಯ ಖಾತೆ ಸಚಿವರಾದ  ಬಿ.ರಾಮಲಿಂಗಾರೆಡ್ಡಿ ಅವರು ಭೇಟಿ ನೀಡಿದರು.  ಈ ಸಂದರ್ಭ ಬಸ್ ನಿಲ್ದಾಣ ಹಾಗೂ ಬಸ್ ಡಿಪೋ ಮತ್ತು ಬಸ್ ಮಾರ್ಗಗಳಿಗೆ ಹೊಸ ಬಸ್ ಗಳನ್ನು ಕೋರಿ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಸಚಿವರಿಗೆ ಮನವಿ ಸಲ್ಲಿಸಿದರು. ಈ ಬಗ್ಗೆ ಪರಿಶೀಲಿಸಿ ಸರಕಾರಿ ಲಭ್ಯಕ್ಕಾನುಸಾರವಾಗಿ ನೂತನ ಬಸ್ ನಿಲ್ದಾಣಕ್ಕೆ ಯೋಜನೆ ರೂಪಿಸುವುದಾಗಿ ಸಚಿವರು ಭರವಸೆ ನೀಡಿದರು.  ಈ ಬಗ್ಗೆ ಗಮನಹರಿಸುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಅವರು  ತಿಳಿಸಿದರು. ಚಂದ್ರಮೌಳಿ ಅವರ ಮನವಿ ಮೇರೆಗೆ ಈಗಾಗಲೆ ಸಂಚಾರ ಪ್ರಾರಂಬಸಿರುವ ,ಮುಂಜಾನೆ ನಾಲ್ಕು ಗಂಟೆಗೆ ಬೆಂಗಳೂರಿಗೆ  ಹೊಸ ಬಸ್ ವ್ಯವಸ್ಥೆ ಕಲ್ಪಿಸಿದ ಹಿನ್ನೆಲೆಯಲ್ಲಿ ಚೆಂಬರ್ ಆಫ್ ಕಾಮರ್ಸ್ ಕೊಡ್ಲಿಪೇಟೆ ಸ್ಥಾನಿಯ ಸಮಿತಿ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು

 

news-details