Breaking News
   
   
   

ಈ ಬಾರಿ ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ರಾಜ್ಯ

news-details

ಈ ಬಾರಿ ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವಕ್ಕೆ ಕೆಲವೇ ದಿನಗಳಷ್ಟೇ ಬಾಕಿ ಇರುವಂತೆ, ದಸರಾ ಉದ್ಘಾಟಕರ ಹೆಸರು ಅಂತಿಮಗೊಳಿಸಲಾಗಿದೆ. ಹಿರಿಯ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ ಅವರು 2024ರ ದಸರಾ ಉದ್ಘಾಟನೆ ಮಾಡಲಿದ್ದಾರೆ.

ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ. ದಸರಾ ಉದ್ಘಾಟನೆಗೆ ಹಲವರ ಹೆಸರುಗಳು ಚರ್ಚೆಗೆ ಬಂದಿದ್ದವು. ಈ ಎಲ್ಲಾ ಚರ್ಚೆಗಳ ನಡುವೆ ಸಿಎಂ ಸಿದ್ದರಾಮಯ್ಯನವರೇ ನಾಡಿನ ಹಿರಿಯ ಸಾಹಿತಿ ಪ್ರೊ.ಹಂ.ಪ. ನಾಗರಾಜಯ್ಯ ಅವರನ್ನು ಉದ್ಘಾಟಕರಾಗಿ ಕರೆಸಿದರೆ ಹೇಗೆ ಎಂಬ ಪ್ರಸ್ತಾಪ ಮಾಡಿದ್ದರು.

ಹಂಪನಾ ಜೈನ ಸಮುದಾಯಕ್ಕೆ ಸೇರಿದವರಾಗಿದ್ದು, ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹಾಗೂ ಹಿರಿಯ ತಲೆಮಾರಿನ ಸಾಹಿತಿ ಎನ್ನುವ ದೃಷ್ಟಿಕೋನದಿಂದ ಅವರನ್ನು ಉದ್ಘಾಟಕರಾಗಿ ಆಯ್ಕೆ ಮಾಡಲು ಸಿಎಂ ಸಿದ್ದರಾಮಯ್ಯ ಇಚ್ಛೆ ವ್ಯಕ್ತಪಡಿಸಿದ್ದರು ಎಂದು ವರದಿಯಾಗಿತ್ತು. ಈಗ ಅದರಂತೆ ಹಂಪನಾ ಅವರನ್ನೇ ಆಯ್ಕೆ ಮಾಡಲಾಗಿದೆ.

news-details