ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಆಯೋಜಿಸಲಾಗಿರುವ 'ಕೆ. ಎಂ. ಎ. ಪ್ರತಿಭಾ ಪುರಸ್ಕಾರ-2024' ವಿತರಣಾ ಸಮಾರಂಭದ ಮುಖ್ಯ ಅತಿಥಿಯಾಗಿರುವ ವಿರಾಜಪೇಟೆ ಕ್ಷೇತ್ರದ ಶಾಸಕರು ಮತ್ತು ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ. ಎಸ್. ಪೊನ್ನಣ್ಣ ಅವರನ್ನು ಸಂಸ್ಥೆಯ ನಿರ್ದೇಶಕರಾದ ಕೋಳುಮಂಡ ರಫೀಕ್ ಅವರು ಬೆಂಗಳೂರಿನ ವಿಧಾನಸೌಧದ ಅವರ ಕಚೇರಿಯಲ್ಲಿ ಭೇಟಿ ಮಾಡಿ ಕಾರ್ಯಕ್ರಮದ ಆಹ್ವಾನ ಪತ್ರವನ್ನು ನೀಡದರು. ಇದೇ ಸಂದರ್ಭದಲ್ಲಿ ಶಾಸಕರ ಜೊತೆಗಿದ್ದ ಡಿಸಿಸಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರಿಗೂ ಆಹ್ವಾನ ಪತ್ರ ನೀಡಲಾಯಿತು. ಈ ವೇಳೆ ಸಂಸ್ಥೆಯ ಸದಸ್ಯರೂ ಆಗಿರುವ ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಪಟ್ಟಿಯಡ ಎ.ಹನೀಫ್ ಉಪಸ್ಥಿತರಿದ್ದರು.