RBIಗೆ ಸಂಜಯ್ ಮಲ್ಹೋತ್ರಾ ಹೊಸ ಗವರ್ನರ್ -
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಗವರ್ನರ್ ಆಗಿ ಕಂದಾಯ ಕಾರ್ಯದರ್ಶಿ ಸಂಜಯ್ ಮಲ್ಹೋತ್ರಾ ಅವರನ್ನು ನೇಮಕ ಮಾಡಲಾಗಿದೆ.
ಬುಧವಾರದಿಂದ ಮೂರು ವರ್ಷಗಳ ಕಾಲ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಮಲ್ಹೋತ್ರಾ ರಾಜಸ್ಥಾನ ಕೇಡರ್‌ನ 1990-ಬ್ಯಾಚ್‌ನ ಭಾರತೀಯ ಆಡಳಿತ ಸೇವೆ (IAS) ಅಧಿಕಾರಿ.
ಅವರು ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಕಂಪ್ಯೂಟರ್ ಸೈನ್ಸ್ ಪದವೀಧರರಾಗಿದ್ದಾರೆ ಮತ್ತು ಯುಎಸ್‌ನ ಪ್ರಿನ್ಸ್‌ಟನ್ ವಿಶ್ವವಿದ್ಯಾಲಯದಿಂದ ಸಾರ್ವಜನಿಕ ನೀತಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.