Breaking News
   
   
   

ವಿರಾಜಪೇಟೆಯ ಮಲೆತಿರಿಕೆ ಬೆಟ್ಟದಲ್ಲಿ ಆಕಸ್ಮಿಕ ಬೆಂಕಿ……

ಕೊಡಗು

news-details

ವಿರಾಜಪೇಟೆ
===================  
ವಿರಾಜಪೇಟೆಯ ಮಲೆತಿರಿಕೆ ಬೆಟ್ಟದಲ್ಲಿ ಅಕಸ್ಮಿಕ ಬೆಂಕಿ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿತು. ಸೋಮವಾರ ಮಧ್ಯಾಹ್ನದ ವೇಳೆ ಬೆಟ್ಟದಲ್ಲಿ ಬೆಂಕಿಯ ಕೆನ್ನಾಲಿಗೆ ವ್ಯಾಪಿಸತೊಡಗಿತು. ಕಂದಾಯ ಇಲಾಖೆ, ಪುರಸಭೆ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಬೆಂಕಿ ನಂದಿಸಲು ಪ್ರಯತ್ನಿಸಿದರು.  ಸಾರ್ವಜನಿಕರು ಬೆಂಕಿ ನಂದಿಸುವ ಕಾರ್ಯಕ್ಕೆ ಸಾಥ್ ನೀಡಿದರು. ಸ್ಥಳಕ್ಕೆ ಪುರಸಭೆ ಪುರಸಭೆ ಅದ್ಯಕ್ಷರಾದ ಎಂ ಕೆ ದೇಚಮ್ಮ, ಮುಖ್ಯಾಧಿಕಾರಿ ನಾಚಪ್ಪ ಮತ್ತು ಸಿಬ್ಬಂದಿ ಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು,ಈ ಸಂದರ್ಭ ಅಗ್ನಿಶಾಮಕ ದಳದ ಸಿಬ್ಬಂದಿಗಳು,  ವಿರಾಜಪೇಟೆ ಪುರಸಭೆ ಪರಿಸರ ಅಭಿಯಂತರ ರೀತುಸಿಂಗ್, ನಗರ ಠಾಣಾದಿಕಾರಿ ವಾಣಿಶ್ರಿ, ಚೆಸ್ ಕಾಂ ಇಲಾಖೆ, ಅರಣ್ಯ ಇಲಾಖೆಯ ಆನೆ ಕಾರ್ಯಪಡೆ, ಸಾರ್ವಜನಿಕರು ಕಾವೇರಿ ವಾಟರ್ ಸರಬರಾಜವಿನ ಮುನಾವರ್ ಸೇರಿದಂತೆ ಹಲವಾರು ಮಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಸಿಕೊಂಡರು.

news-details