Breaking News
   
   
   

ವಿದ್ಯಾರ್ಥಿಗಳು, ಶಿಕ್ಷಕರ ಮೇಲೆ ಹೆಜ್ಜೇನು ದಾಳಿ…!-ಪ್ರಾಣಾಪಾಯದಿಂದ ಪಾರು-ಬೈರಂಬಾಡ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಘಟನೆ……

ಕೊಡಗು

news-details

ಹೆಜ್ಜೇನು ದಾಳಿಯಿಂದ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಗಾಯಗೊಂಡ ಘಟನೆ ವಿರಾಜಪೇಟೆ ತಾಲೂಕಿನ ಹಾಲುಗುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರಂಬಾಡ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಹೆಜ್ಜೇನು ದಾಳಿಯಿಂದ  ೧೯ ವಿದ್ಯಾರ್ಥಿಗಳು, ಇಬ್ಬರು ಶಿಕ್ಷಕರು, ಓರ್ವ ಬಿಸಿಯೂಟ ತಯಾರಿಕಾ ಅಡಿಗೆ ಸಿಬ್ಬಂದಿ ಗಾಯಗೊಂಡಿದ್ದಾರೆ.  ಮಧ್ಯಾಹ್ನ ಊಟದ ವಿರಾಮದ ನಂತರ ಆವರಣದಲ್ಲಿದ್ದ ವಿದ್ಯಾರ್ಥಿಗಳು ಕೊಠಡಿಗೆ ತೆರಳಲು ಮುಂದಾಗಿದ್ದಾರೆ. ಈ ವೇಳೆ ಏಕಾಏಕಿ ಹೆಜ್ಜೇನು ದಾಳಿ ನಡೆಸಿವೆ. ಹೆಜ್ಜೇನು ದಾಳಿಯಿಂದ ಗಾಯಗೊಂಡ ವಿದ್ಯಾರ್ಥಿಗಳು ಕಿರುಚಾಡಿದ್ದಾರೆ. ಅಲ್ಲೇ ಇದ್ದ ಶಿಕ್ಷಕರುಗಳು ತಕ್ಷಣವೇ ಮಕ್ಕಳನ್ನು ಕೊಠಡಿಯಲ್ಲಿ ಕೂಡಿ ಹಾಕಿ, ಕಿಟಕಿ ಬಾಗಿಲನ್ನು ಮುಚ್ಚುವ ಮೂಲಕ ಸಂಭಾವ್ಯ ಅಪಾಯದಿಂದ ಮಕ್ಕಳನ್ನು ರಕ್ಷಿಸಿದ್ದಾರೆ. ಈ ವೇಳೆ ಮುಖ್ಯ ಶಿಕ್ಷಕಿ ಪದ್ಮ, ಸಹ ಶಿಕ್ಷಕಿ  ಪ್ರತಿಮಾ ಎಂಬವರು ಹೆಜ್ಜೇನು ದಾಳಿಗೆ ತುತ್ತಾಗಿದ್ದಾರೆ. ಮಕ್ಕಳ ಚೀರಾಟ ಕೇಳಿ ಗ್ರಾಮ ಪಂಚಾಯಿತಿ ಸದಸ್ಯ ಎಂ.ಎಸ್ ಪೂವಯ್ಯ ಅವರು ಪಂದಿಕAಡ ದಿನೇಶ್ ಎಂಬವರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕಾಗಮಿಸಿದ ದಿನೇಶ್, ಹೆಜ್ಜೇನು ದಾಳಿಯಿಂದ ಗಾಯಗೊಂಡ ವಿದ್ಯಾರ್ಥಿಗಳು ಹಾಗೂ ಶಿಕ್ಷಕಿಯರನ್ನು ಕಣ್ಣಂಗಾಲ ಉಪ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲು ನೆರವಾಗಿದ್ದಾರೆ. ಕಣ್ಣಂಗಾಲ ಉಪ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಸಾಗರ್  ಅವರು ಗಾಯಾಳು ವಿದ್ಯಾರ್ಥಿಗಳು ಮತ್ತು ಶಿಕ್ಷಕಿಯರಿಗೆ ಸೂಕ್ತ ಚಿಕಿತ್ಸೆ ನೀಡಿ ಆರೈಕೆ ಮಾಡಿದ್ದಾರೆ. ಚಿಕಿತ್ಸೆಯಿಂದ ಚೇತರಿಸಿಕೊಂಡ ವಿದ್ಯಾರ್ಥಿಗಳು, ಶಿಕ್ಷಕಿಯರು ಪ್ರಾಣಾಪಾಯದಿಂದ ಪಾರಾಗಿ ಮನೆಗೆ ಹಿಂತಿರುಗಿದ್ದಾರೆ. ವಿಷಯ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿಗಳು  ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಲಾ ಸಮೀಪದಲ್ಲಿ ದೇವರ ಕಾಡು ಅರಣ್ಯ ಪ್ರದೇಶವಿದ್ದು ಆ ವ್ಯಾಪ್ತಿಯಲ್ಲಿದ್ದ ಹೆಜ್ಜೇನು ಹುಳಗಳು ದಾಳಿ ಮಾಡಿವೆ ಎಂದು ಅರಣ್ಯ ಇಲಾಖಾಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

news-details