ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಅಣ್ಣಾಮಲೈ »
ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ಘೋಷಿಸಿದ್ದಾರೆ. ರಾಜ್ಯದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಮತ್ತು ಎಐಎಡಿಎಂಕೆ ನಡುವಿನ ಮೈತ್ರಿ ಮಾತುಕತೆಗಳು ಅವರ ನಿರ್ಗಮನಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ಮುಂದಿನ ನಾಯಕನನ್ನು ಪಕ್ಷದ ಎಲ್ಲಾ ಸದಸ್ಯರು ಸರ್ವಾನುಮತದಿಂದ ನಿರ್ಧರಿಸುತ್ತಾರೆ ಎಂದು ಅಣ್ಣಾಮಲೈ ಹೇಳಿದ್ದಾರೆ.ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಏಪ್ರಿಲ್ 7 ರಂದು ನಡೆಯಲಿದ್ದು, ಏಪ್ರಿಲ್ 7 ರಂದು ಘೋಷಣೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ. ತೆಲಂಗಾಣ ಬಿಜೆಪಿ ಅಧ್ಯಕ್ಷ ಕಿಶನ್ ರೆಡ್ಡಿ ಅವರು ಏಪ್ರಿಲ್ 7 ರಂದು ತಮಿಳುನಾಡಿಗೆ ಭೇಟಿ ನೀಡಲಿದ್ದು, ಹೊಸ ರಾಜ್ಯ ಅಧ್ಯಕ್ಷರ ನೇಮಕದ ಬಗ್ಗೆ ಚರ್ಚಿಸಲಿದ್ದಾರೆ.