ಚಲಿಸುತ್ತಿದ್ದ ಕಾರಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಮಡಿಕೇರಿ ಹೊರ ವಲಯದ ಸಿಂಕೋನ ಬಳಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾನುವಾರ ಮಧ್ಯಾಹ್ನ ೨ ಗಂಟೆ ಸಮಯದಲ್ಲಿ ಮಡಿಕೇರಿಯಿಂದ ಸುಂಟಿಕೊಪ್ಪ ಕಡೆಗೆ ತೆರಳುತ್ತಿದ್ದ ಡಸ್ಟರ್ ಕಾರಿನ ಇಂಜಿನ್ ಬಳಿ ಮೊದಲು ಹೊಗೆ ಕಾಣಿಸಿಕೊಂಡಿದೆ. ತಕ್ಷಣವೇ ಬೆಂಕಿಯೂ ಕಂಡು ಬಂದಿದ್ದು, ಕಾರಿನಲ್ಲಿದ್ದ ಇಬ್ಬರು ಯುವಕರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿ ಸಂಪೂರ್ಣ ಕಾರನ್ನು ಸುಟ್ಟು ಕರಕಲಾಗಿಸಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದರು. ಈ ಘಟನೆಯಿಂದ ಮಡಿಕೇರಿ-ಕುಶಾಲನಗರ ರಾಷ್ಟಿçÃಯ ಹೆದ್ದಾರಿ ೨೭೫ನಲ್ಲಿ ಕೆಲಕಾಲ ಟ್ರಾಫಿಕ್ ಸಮಸ್ಯೆ ಕಂಡುಬAತು