ಟಿಪ್ಪರ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುಶಾಲನಗರ ಸಮೀಪ ಕೊಪ್ಪ ಹೆದ್ದಾರಿಯಲ್ಲಿ ನಡೆದಿದೆ. ಬೈಕ್ ಹಿಂಬದಿ ಕುಳಿತ್ತಿದ್ದ ಮಡಿಕೇರಿ ತಾಲ್ಲೂಕಿನ ೨೨ ವರ್ಷ ಪ್ರಾಯದ ಸಾಮ್ವೆಲ್ ಮೃತ ದುರ್ದೈವಿಯಾಗಿದ್ದು, ತೀವ್ರವಾಗಿ ಗಾಯಗೊಂಡಿರುವ ಮತ್ತೊಬ್ಬ ಸವಾರ ೨೩ ವರ್ಷ ಪ್ರಾಯದ ನವೀನ ಎಂಬಾತನನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕುಶಾಲನಗರದಿಂದ ಪಿರಿಯಾಪಟ್ಟಣ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಹಾಗೂ ಬೈಲಕುಪ್ಪೆ ಕಡೆಯಿಂದ ಕೊಪ್ಪ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಕೊಪ್ಪ ಆರೋಗ್ಯ ಕೇಂದ್ರದ ಸಮೀಪ ಈ ದುರ್ಘಟನೆ ಸಂಭವಿಸಿದೆ. ಬೈಲಕುಪ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.