ಕಾಡಾನೆ ದಾಳಿಯಿಂದ ವಾಕಿಂಗ್‌ಗೆAದು ತೆರಳಿದ್ದ ವ್ಯಕ್ತಿಯೊರ್ವರು ಸಾವನ್ನಪ್ಪಿದ ಘಟನೆ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಬಳಿಯ ಎಮ್ಮೆ ಗುಂಡಿ ಕಾಫಿ ತೋಟದ ಮುಖ್ಯ ರಸ್ತೆಯಲ್ಲಿ ನಡೆದಿದೆ. ಎಮ್ಮೆಗುಂಡಿ ಕಾಫಿ ತೋಟದ ಕಾರ್ಮಿಕನಾಗಿ ವಾಸವಾಗಿದ್ದ ೫೫ ವರ್ಷ ಪ್ರಾಯದ ಸೆಲ್ವಂ ಎಂಬುವರೇ ಕಾಡಾನೆಯ ದಾಳಿಯಿಂದ ಪ್ರಾಣ ಕಳೆದುಕೊಂಡ ದುರ್ದೈವಿಯಾಗಿದ್ದಾರೆ. ಗುರುವಾರ ಬೆಳಿಗ್ಗೆ ಮನೆಯ ಸಮೀಪದ ಮುಖ್ಯರಸ್ತೆಯಲ್ಲಿ ವಾಯು ವಿಹಾರಕ್ಕೆ ನಡೆದು ಹೋಗುತ್ತಿದ್ದಾಗ ಸಮೀಪದ ಕಾಫಿ ತೋಟದಲ್ಲಿ ಬಿಡು ಬಿಟ್ಟಿದ್ದ ಮೂರು ಕಾಡಾನೆಗಳು ರಸ್ತೆ ದಾಟಲು ಬರುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಡಾನೆ ದಾಳಿಗೆ ಚೆಲ್ಲಮೇಸ್ತಿç ಅವರು ಸಿಲುಕಿಕೊಂಡಿದ್ದಾರೆ. ಕಾಡಾನೆ ದಾಳಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಸಂದರ್ಭ ಆಕ್ರೋಶಗೊಂಡ ಕಾಡಾನೆಯೊಂದು ದಾಳಿ ಮಾಡಿದ ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾಡಾನೆಗಳು ಘೀಳಿಡುವ ಶಬ್ದ ಕೇಳಿದ ಸ್ಥಳೀಯರು ಸ್ಥಳಕ್ಕೆ ಬರುವಷ್ಟರಲ್ಲಿ ಕಾಡಾನೆ ಕಾರ್ಮಿಕನನ್ನು ಬಲಿಪಡೆದಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭ ಕಾಡಾನೆ ಹಾವಳಿ ಮಿತಿಮೀರಿದ್ದು, ಕಾಡಾನೆಗಳ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟಬೇಕೆಂದು ಕಾರ್ಮಿಕರು ಒತ್ತಾಯಿಸಿದರು. ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಸ್ಥಳಕ್ಕೆ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾದ ಮೇರಿಯಂಡ ಸಂಕೇತ್ ಪೂವಯ್ಯ ಭೇಟಿ ನೀಡಿ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಸರ್ಕಾರದಿಂದ ಸಿಗುವ ೨೦ ಲಕ್ಷ ರೂಪಾಯಿಗಳ ಪರಿಹಾರವನ್ನು ತಕ್ಷಣವೇ ನೀಡಲಾಗುವುದು ಎಂದು ಹೇಳಿದ ಅವರು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ ಎಸ್ ಪೊನ್ನಣ್ಣ ಅವರಿಗೆ ಘಟನೆಯ ಮಾಹಿತಿ ನೀಡಿದರು . ನಂತರ ಶಾಸಕರು ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ತಕ್ಷಣವೇ ಕಾರ್ಯಾಚರಣೆ ಮೂಲಕ ಕಾಡಿಗಟ್ಟಬೇಕೆಂದು ಖಡಕ್ ಸೂಚನೆ ನೀಡಿದರು. ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಕಾಡಾನೆ ಹಾವಳಿ ಇರುವ ಪ್ರದೇಶದಲ್ಲಿ ಸಿಬ್ಬಂದಿಗಳನ್ನು ನಿಯೋಜಿಸಿ ಕಾಡಿಗಟ್ಟಲು ಮುಂದಾಗಿದ್ದಾರೆ. ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಪಾಲಿಬೆಟ್ಟದ ಮೂಕೊಂಡ ವಿಜು ಸುಬ್ರಮಣಿ ಅವರು ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿರಲ್ಲದೇ, ಅರಣ್ಯ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ದಿನನಿತ್ಯ ಕಾಫಿ ತೋಟಗಳಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು, ಕೃಷಿ ಪಸಲು ನಾಶದೊಂದಿಗೆ ಅಮಾಯಕ ಜೀವಗಳು ಬಲಿಯಾಗುತ್ತಿದ್ದು ಕೊಡಗಿನ ಜನರ ತಾಳ್ಮೆಯನ್ನು ಪರೀಕ್ಷಿಸದೆ ಕಾಡು ಪ್ರಾಣಿಗಳ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟಬೇಕೆಂದು ಒತ್ತಾಯಿಸಿದ ಅವರುಮ ಕಾರ್ಮಿಕರು, ಬೆಳೆಗಾರರನ್ನ ಒಗ್ಗೂಡಿಸಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಚ್ಚರಿಸಿದರು.
ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಅಜಿತ್ ಕರಂಬಯ್ಯ ಅವರು ಮಾತನಾಡಿ, ಕಾಡು ಪ್ರಾಣಿಗಳ ಹಾವಳಿಯಿಂದ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಮಾಯಕ ಜೀವಗಳು ಬಲಿಯಾಗುತ್ತಿದೆ. ಕಾಡಾನೆ ದಾಳಿಯಿಂದ ಮೃತಪಟ್ಟ ಕುಟುಂಬಕ್ಕೆ ಕೂಡಲೇ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭ ಡಿಎಫ್‌ಓ ಜಗನ್ನಾಥ್, ಎಸಿಎಫ್ ಗೋಪಾಲ್, ಆರ್.ಎಫ್.ಓ ಶಿವರಾಮ್, ಗಂಗಾಧರ್ ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು. ಮೃತ ಸೆಲ್ವಂ ಅವರ ಪತ್ನಿಗೆ ತುರ್ತು ಪರಿಹಾರವಾಗಿ ೫ ಲಕ್ಷ ರೂಪಾಯಿಗಳ ಚೆಕ್ ನ್ನು ನೀಡಲಾಯಿತು ಮೃತ ದೇಹದ ಅಂತ್ಯಸAಸ್ಕಾರ ನಡೆಸಲು ತಮಿಳುನಾಡಿನ ಮಧುರೈಗೆ ಆಂಬುಲೆನ್ಸ್ ಮೂಲಕ ಕೊಂಡೊಯ್ಯಲಾಯಿತು. ಸಿದ್ದಾಪುರ ಠಾಣಾಧಿಕಾರಿ ರಾಘವೇಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.