ನವದೆಹಲಿ : ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಗೆ ತೆರೆಬಿದ್ದಿದೆ. ಅಕ್ಟೋಬರ್ 17ರಂದು ನಡೆದಿದ್ದ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು 7,000 ಕ್ಕೂ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಅದ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಪ್ರತಿಸ್ಪರ್ಧಿ ಶಶಿ ತರೂರ್ ಅವರು 1,000 ಮತಗಳನ್ನು ತಮ್ಮದಾಗಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ.
ಈ ಚುನಾವಣೆಯಲ್ಲಿ ಒಟ್ಟು 9,915 ಪ್ರತಿನಿಧಿಗಳ ಪೈಕಿ 9,497 ಪ್ರತಿನಿಧಿಗಳು ಮತ ಚಲಾಯಿಸಿದ್ದರು. ದೇಶದಾದ್ಯಂತ 65 ಮತಕೇಂದ್ರಗಳಲ್ಲಿ ಪ್ರತಿನಿಧಿಗಳು ಮತ ಚಲಾವಣೆ ಮಾಡಿದ್ದರು. 416 ಮತಗಳು ಅಮಾನ್ಯಗೊಂಡಿವೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ಮತ ಏಣಿಕೆ ಪ್ರಕ್ರಿಯ ನಡೆದಿದೆ. ಮಲ್ಲಿಕಾರ್ಜುನ ಖರ್ಗೆ ಅವರ ಆಯ್ಕೆಯು ಕರ್ನಾಟಕ ಕಾಂಗ್ರೆಸ್‌ನಲ್ಲಿ ಹೊಸ ಹರುಪು ನೀಡಿದೆ.