ನಾಪೋಕ್ಲು : ಯುವತಿಯೊಬ್ಬಳು ಗದ್ದೆಯಲ್ಲಿ ದನ ಕಟ್ಟಲು ಕೆರೆಯ ಪಕ್ಕದ ದಾರಿಯಲ್ಲಿ ಹೋಗುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವೀಗಿಡಾದ ಘಟನೆ ಪಾರಾಣೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಿರುಂದಾಡು ಗ್ರಾಮದಲ್ಲಿ ನಡೆದಿದೆ.
ಪಾರಾಣೆ ಗ್ರಾ.ಪಂ. ಸದಸ್ಯೆ ದಾಕ್ಷಾಯಿಣಿ ಹಾಗೂ ಕುಶಾಲಪ್ಪ ದಂಪತಿ ಮಗಳು ಚಸ್ಮಿಕಾ (20) ಮೃತ ದುರ್ದೈವಿ. ಚಸ್ಮಿಕಾ ಮೂರ್ನಾಡು ಕಾಲೇಜಿನಲ್ಲಿ ಬಿ.ಕಾಂ. ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ.
ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿತ್ತು. ಸ್ಥಳಕ್ಕೆ ವಿರಾಜಪೇಟೆ ಶಾಸಕರಾದ ಕೆ ಜಿ ಬೋಪಯ್ಯ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಮೃತದೇಹವನ್ನು ಕೆರೆಯಿಂದ ಹೊರತೆಗೆಯಲು ನಾಪೋಕ್ಲುವಿನ ಅಬ್ದುಲ್ ರಜಾಕ್, ಅಬ್ದುಲ್ ಮಜೀದ್, ಶಮೀರ್ ಸಹಾಯ ಮಾಡಿದರು. ಸ್ಥಳಕ್ಕೆ ನಾಪೋಕ್ಲು ಪೊಲೀಸ್ ಠಾಣಾಧಿಕಾರಿ ಸದಾಶಿವ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.