Breaking News
   
   
   

ಹೆಚ್‌.ಡಿ ಕುಮಾರಸ್ವಾಮಿಗೆ ದೀಪಾವಳಿ ಶುಭಾಶಯ ಕೋರಿದ ಜಿ.ಟಿ. ದೇವೇಗೌಡ.

ರಾಜ್ಯ

news-details

ಬೆಂಗಳೂರು : ಜೆಡಿಎಸ್ ಪಕ್ಷದ ಕೇಂದ್ರ ಕಚೇರಿ ಜೆ. ಪಿ. ಭವನಕ್ಕೆ ಆಗಮಿಸಿದ ಜಿ.ಟಿ. ದೇವೇಗೌಡ ಅವರು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿಗೆ ಸಿಹಿ ತಿನ್ನಿಸಿ ದೀಪಾವಳಿ ಶುಭಾಶಯ ಕೋರಿದರು. 

 ಸುಮಾರು ಮೂರೂವರೆ ವರ್ಷದ ಬಳಿಕ ಪಕ್ಷದ ಕಚೇರಿಗೆ ಭೇಟಿ ನೀಡಿದ ಜಿ.ಟಿ. ದೇವೇಗೌಡ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಗೊಂಡ ಬಳಿಕ ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರವಾಗಿದ್ದರು. ಕಳೆದ ವಾರ ಮೈಸೂರಿನಲ್ಲಿ ಶಾಸಕ ಜಿ.ಟಿ. ದೇವೇಗೌಡ ಅವರ ಮನೆಗೆ ಜೆಡಿಎಸ್‌ ವರಿಷ್ಠ ಹೆಚ್. ಡಿ. ದೇವೇಗೌಡ ಭೇಟಿ ನೀಡಿದ್ದರು. ಬುಧವಾರ ದೀಪಾವಳಿಯ ಅಂಗವಾಗಿ ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ ಪಕ್ಷದ ಕಚೇರಿಗೆ ಭೇಟಿ ನೀಡಿದರು.

news-details