ಮಡಿಕೇರಿ : ಕೊಡಗು ಜಿಲ್ಲಾ ಪಂಚಾಯತಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ. ಆಕಾಶ್ ಎಸ್. ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ನಿರ್ಗಮಿತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಅವರು ಹೂ ಗುಚ್ಛ ನೀಡುವ ಮೂಲಕ ನೂತನ ಸಿ.ಇ.ಒ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ನೂತನ ಸಿ.ಇ.ಒ ಅವರು 2019ನೇ ಬ್ಯಾಚ್ನ ಐ.ಎ.ಎಸ್. ಅಧಿಕಾರಿಯಾಗಿದ್ದು, ಈ ಹಿಂದೆ ಬಳ್ಳಾರಿ ಜಿಲ್ಲೆ ಬಳ್ಳಾರಿ ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.