Breaking News
   
   
   

ನಾಡಪ್ರಭು ಶ್ರೀ ಕೆಂಪೇಗೌಡರ ಪ್ರತಿಮೆಗೆ ಮೃತ್ತಿಕೆ ಸಂಗ್ರಹಣೆ ರಥ ಯಾತ್ರೆಗೆ ಚೆಯ್ಯಂಡಾಣೆಯಲ್ಲಿ ಅದ್ದೂರಿ ಸ್ವಾಗತ

ಕೊಡಗು

news-details

ಚೆಯ್ಯಂಡಾಣೆ : ನಾಡಪ್ರಭು ಶ್ರೀ ಕೆಂಪೇಗೌಡರ 108 ಅಡಿ ಎತ್ತರದ ಭವ್ಯ ಕಂಚಿನ ಪ್ರಗತಿಯ ಪ್ರತಿಮೆ ಅನಾವರಣ ಪ್ರಯುಕ್ತ ಕೊಡಗಿನ  ವಿವಿಧ ಸ್ಥಳಗಳಿಂದ ಪವಿತ್ರ ವೃತ್ತಿಕೆ ಸಂಗ್ರಹಣೆ ಮಾಡಲಾಗುತ್ತಿದೆ. ಅದರ ಅಂಗವಾಗಿ ಮೃತ್ತಿಕೆ ಸಂಗ್ರಹಿಸುವ ವಾಹನ ಚೆಯಂಡಾಣೆಗೆ ಆಗಮಿಸಿದ ಸಂದರ್ಭ ಸಂಜೀವಿನಿ ಒಕ್ಕೂಟದ ಮಹಿಳೆಯರು ಕಳಸ ಹೊತ್ತು ವಾಹನವನ್ನು ಬರಮಾಡಿಕೊಂಡುರು ಪುಷ್ಪಾರ್ಚನೆ ಯೊಂದಿಗೆ ಕೊಕೇರಿ ಮಹಿಳಾ ಮಂಡಳಿಯ ಸದಸ್ಯೆಯರು ಸ್ವಾಗತಿಸಿದರು.


ಸ್ಥಳೀಯ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಮನೋಹರ್ ನಾಯ್ಕ್ ಕೆಂಪೇಗೌಡರ ಪ್ರತಿಮೆ ಅನಾವರಣದ ಬಗ್ಗೆ ಮಾತನಾಡಿದರು. ಈ ಸಂದರ್ಭ ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜೇಶ್ ಅಚ್ಚಯ್ಯ, ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ, ಗ್ರಾಮ ಪಂಚಾಯಿತಿ ಸದಸ್ಯರು ಮೃತ್ತಿಕೆ ಯನ್ನು ಹಸ್ತಾಂತರಿಸಿದರು.


ಈ ಸಂದರ್ಭ ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಕೋಡಿರ ಪ್ರಸನ್ನ ತಮ್ಮಯ್ಯ, ಕೊಳೆಯಡ ಗಿರೀಶ್, ಶಕ್ತಿ ಕೇಂದ್ರದ ಅಧ್ಯಕ್ಷ ದನೋಜ್ ಪೋಕುಳಂಡ್ರ, ಯುವ ಮೋರ್ಚಾ ಉಪಾಧ್ಯಕ್ಷ ಪವನ್ ತೋಟಂಬೈಲು, ಆರ್.ಐ. ರವಿ ಕುಮಾರ್, ಗ್ರಾ.ಪ.ಉಪಾಧ್ಯಕ್ಷೆ ಪುಷ್ಪ, ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು, ಅಂಗವಾಡಿ ಕಾರ್ಯಕರ್ತೆಯರು, ಸ್ವಸಹಾಯ ಸಂಘದ ಸದಸ್ಯೆಯರು, ಕೊಕೇರಿ, ನರಿಯಂದಡ, ಚೇಲವಾರ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
 

news-details