ಮಡಿಕೇರಿ : ಜಿಲ್ಲಾಡಳಿತದ ವತಿಯಿಂದ 67 ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯು ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಧ್ವಜಾರೋಹಣ ನೆರವೇರಿಸಿದರು.
ರಾಜ್ಯೋತ್ಸವ ಸಂದೇಶ ನೀಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು, ಕನ್ನಡ ನಾಡು ನುಡಿ ಸಂಸ್ಕೃತಿಯನ್ನು ಪಸರಿಸುವಲ್ಲಿ ಸರ್ಕಾರ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಕಳೆದ ವರ್ಷದಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ‘ಮಾತಾಡ್ ಮಾತಾಡು ಕನ್ನಡ’, ಹಾಗೆಯೇ ಈ ವರ್ಷ ‘ಕೋಟಿ ಕಂಠ ಗಾಯನ’ ಮೂಲಕ ಕನ್ನಡ ನಾಡಿನಾದ್ಯಂತ ಸಹಸ್ರಾರು ಜನರು ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕನ್ನಡತನವನ್ನು ಮೆರೆದಿದ್ದಾರೆ ಎಂದರು.
ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಜಿಲ್ಲಾ ಪಂಚಾಯ್ತಿ .ಸಿಇಒ ಡಾ.ಎಸ್.ಆಕಾಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೇದಮೂರ್ತಿ, ಹಲವು ಇಲಾಖೆ ಅಧಿಕಾರಿಗಳು ಇತರರು ಇದ್ದರು. ನಗರದ ಕೋಟೆ ಆವರಣದಲ್ಲಿ ಮೆರವಣಿಗೆಗೆ ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್ ಅವರು ಚಾಲನೆ ನೀಡಿದರು.