Breaking News
   
   
   

ಮಡಿಕೇರಿಯಲ್ಲಿ ಓಣಾಘೋಷಂ, ಓಣಂ ಸಧ್ಯ-2022 ಆಚರಣೆ

ಕೊಡಗು

news-details

ಮಡಿಕೇರಿ : ಮಡಿಕೇರಿಯ ಹಿಂದೂ ಮಲಯಾಳಿ ಸಂಘದ ವತಿಯಿಂದ  ಓಣಾಘೋಷಂ, ಓಣಂ ಸಧ್ಯ ನಗರದ ಕಾವೇರಿ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಮಂಗಳವಾರ ಬೆಳಗ್ಗೆ  ಆಕರ್ಷಕ  ಪೂಕಳಂ ಸ್ಪರ್ಧೆ ನಡೆಯಿತು.

ಬಳಿಕ ಮದೆನಾಡಿನ ಕಾಫಿ ಬೆಳೆಗಾರ ಪ್ರಕಾಶ್ ಅವರು ರಾಷ್ಟ ಧ್ವಜಾರೋಹಣ ನೆರವೇರಿಸಿದರೇ, ಹಾಗೂ ಓಣಂ ಸಧ್ಯ ಆಚರಣಾ ಸಮಿತಿ ಅಧ್ಯಕ್ಷ ಟಿ.ಆರ್.ವಾಸುದೇವ ಕನ್ನಡ ಧ್ವಜಾರೋಹಣ ನೆರವೇರಿಸಿದರು.

ಸಭಾ ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಉದ್ರಾಟಿಸಿದರು. ಬಳಿಕ ಮಾತನಾಡಿದ ಅವರು, ಹಿಂದೂ ಮಲಯಾಳಿ ಸಂಘದ ವತಿಯಿಂದ  ಮಾಜಿ ಸೈನಿಕರನ್ನು ಸನ್ಮಾನಿಸುತ್ತಿರುವುದು ಶ್ಲಾಘನೀಯವಾಗಿದ್ದು, ಇದರಿಂದ ಸೈನ್ಯಕ್ಕೆ ಸೇರಬೇಕು. ದೇಶ ರಕ್ಷಣೆ ಮಾಡಬೇಕೆಂಬ ಇಚ್ಛೆ ಉಳ್ಳವರಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ರು.

ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಹಿಂದೂ ಮಲಯಾಳಿ ಸಂಘವನ್ನು ಜಿಲ್ಲೆಯ ಎಲ್ಲೆಡೆ ಅಸ್ಥಿತ್ವಕ್ಕೆ ತರುವ ಮೂಲಕ ಸಮುದಾಯ ಬಾಂಧವರಲ್ಲಿ ಒಗಟ್ಟು ಮೂಡಿಸುತ್ತಿರುವ ಕಾರ್ಯ ಶ್ಲಾಘನೀಯವಾಗಿದ್ದು, ಸಮಾಜ ಒಗ್ಗಟ್ಟಿನ ಮೂಲಕ ಓಣಂ ಆಚರಿಸುವ ಮೂಲಕ ಸಮಾಜಕ್ಕೆ ಒಗ್ಗಟ್ಟಿನ ಸಂದೇಶವನ್ನು ಸಾರಲಾಗುತ್ತಿದೆ ಎಂದು ಹೇಳಿದ್ರು.

ಹಿಂದೂ ಮಲಯಾಳಿ ಸಂಘದ  ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷ ವಿ.ಎಂ.ವಿಜಯ ಮಾತನಾಡಿ, ಸಮಾಜ ಬಾಂಧವರು ತಮ್ಮ ಭಾಷೆ, ಸಂಸ್ಕೃತಿ, ಆಚಾರ, ವಿಚಾರ, ಸಂಪ್ರದಾಯವನ್ನು ಆಚರಿಸುವ ಜತೆಗೆ  ಕನ್ನಡ ಭಾಷೆಗೂ ಮಹತ್ವವನ್ನು ನೀಡಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ.ಎಸ್.ರಮೇಶ್,  ಅನ್ನ ಕೊಡುವ ಭಾಷೆ ಕನ್ನಡ ರಾಜ್ಯೋತ್ಸವ ಆಚರಣೆಯೊಂದಿಗೆ ಓಣಂ ಹಬ್ಬವನ್ನು ಆಚರಿಸುತ್ತಿರುವುದು ನೆನಪಿನಲ್ಲಿ ಉಳಿಯುವಂತಾಗಿದೆ. ಮಡಿಕೇರಿಯ ಹಿಂದೂ ಮಲಯಾಳಿ ಸಂಘವು ಸಮಾಜ ಬಾಂಧವರ ಶ್ರೇಯೋಭಿವೃದ್ಧಿಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ ಎಂದರು.

ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಮುತ್ತಪ್ಪ ದೇವಾಲಯ ಸಮಿತಿ ಅಧ್ಯಕ್ಷಟಿ.ಕೆ.ಸುಧೀರ್ ಹಾಗೂ ಇತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೆಚ್ಚು ಹಿಂದೂ ಮಲಯಾಳಿ ಬಾಂಧವರು ಪಾಲ್ಗೊಂಡಿದ್ದರು. ಕಾರ್ಯಕ್ರಮಕ್ಕೂ ಮುನ್ನ  ನಗರದ ಗಾಂಧಿ ಮೈದಾನದಿಂದ ಕಾವೇರಿ ಹಾಲ್‌ವರೆಗೆ ಒಣಾಘೋಷಂ ಮೆರವಣಿಗೆ ಅದ್ದೂರಿಯಾಗಿ ನಡೆಯಿತು. ಮೆರವಣಿಗೆಯಲ್ಲಿ ಸಾಂಪ್ರದಾಯಿಕ ಉಡುಪು ಧರಿಸಿದ ಪುರುಷರು ಹಾಗೂ ಸ್ತ್ರೀಯರು ಮೆರವಣಿಗೆಯಲ್ಲಿ ಪಾಲ್ಗೊಂಡು ಗಮನ ಸೆಳೆದ್ರು.

news-details