Breaking News
   
   
   

ಶನಿವಾರಸಂತೆಯಲ್ಲಿ ರಾಜ್ಯೋತ್ಸವ ಪ್ರಯುಕ್ತ ನಡೆದ ಕನ್ನಡ ರಸಪ್ರಶ್ನೆ ಕಾರ್ಯಕ್ರಮ

ಕೊಡಗು

news-details

ಶನಿವಾರಸಂತೆ : ಜಾನಪದ ಪರಿಷತ್ ಶನಿವಾರಸಂತೆ ಹೋಬಳಿ ಘಟಕ ಮತ್ತು ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರ ಸುಪ್ರಜ ಗುರುಕುಲ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಪ್ರಾಥಮಿಕ ಹಿರಿಯ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕನ್ನಡ ರಸಪ್ರಶ್ನೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು. ಘಟಕದ ಸದಸ್ಯ ಸುರೇಶ್ ಮೊಗೆರಾ ಜಾನಪದ ಗಾಯನ ಹಾಡುವ ಮೂಲಕ ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷೆ ಹಾಗೂ ಸುಪ್ರಜ ಗುರುಕುಲ ಶಾಲೆಯ ಪ್ರಾಂಶುಪಾಲೆ ಡಿ.ಸುಜಲಾದೇವಿ ಮಾತನಾಡಿ-ವಿದ್ಯಾರ್ಥಿಗಳಿಗೆ ಕನ್ನಡ, ಭಾಷೆ, ಸಾಹಿತ್ಯ, ಸಂಸ್ಕೃತಿ, ನಾಡು, ಮುಂತಾದ ಕನ್ನಡದ ಸೊಗಡುಗಳ ಬಗ್ಗೆ ಅರಿತುಕೊಳ್ಳುವ ಅಗತ್ಯ ಇದೆ, ಸ್ಪಾರ್ಧಾತ್ಮಕ ಪರೀಕ್ಷೆಗಳಿಗೆ ಕನ್ನಡದ ಸಾಮಾನ್ಯ ಜ್ಞಾನದ ಅವಶ್ಯಕತೆ ಈ ಉದ್ದೇಶದಿಂದ ಜಾನಪದ ಪರಿಷತ್ ಮತ್ತು ಸುಪ್ರಜ ಗುರುಕುಲ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಪ್ರತಿ ವರ್ಷ ಕನ್ನಡ ರಾಜ್ಯೋತ್ಸವ ಪ್ರಯುಕ್ತ ವಿದ್ಯಾರ್ಥಿಗಳಿಗೆ ಕನ್ನಡ ರಸ ಪ್ರಶ್ನೆ ಸ್ಪರ್ಧೆಯನ್ನು ಹಮ್ಮಿಕೊಳ್ಳುತ್ತಿದೆ ಎಂದರು.

ಘಟಕದ ಗೌರವಾಧ್ಯಕ್ಷೆ ನಯನತಾರ ಪ್ರಕಾಶ್‌ ಚಂದ್ರ ಅಧ್ಯಕ್ಷತೆ ವಹಿಸಿ ಮಾತನಾಡಿದರು ಕಾರ್ಯಕ್ರಮದಲ್ಲಿ ದುಂಡಳ್ಳಿ ಗ್ರಾ.ಪಂ.ಅಧ್ಯಕ್ಷೆ ಪೂರ್ಣಿಮಾ ಕಿರಣ್, ಘಟಕದ ಉಪಾಧ್ಯಕ್ಷ ಎ.ಎನ್.ಹರೀಶ್, ಘಟಕದ ಸದಸ್ಯರಾದ ದಿನೇಶ್ ಮಾಲಂಬಿ, ಸುರೇಶ್ ಮೊಗೆರ ಹಾಜರಿದ್ದರು. ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಲೆಗಳಿಂದ 4 ತಂಡಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
 

news-details