ಮಡಿಕೇರಿ : ವಾಲ್ನೂರು ತ್ಯಾಗತ್ತೂರು ಗ್ರಾಮದಲ್ಲಿ ನಡೆದ ಬಿ.ಜೆ.ಪಿ. ಕಾರ್ಯಕರ್ತರ ಸಭೆಯಲ್ಲಿ ಸುಮಾರು 200 ಮಂದಿ ಕಾಂಗ್ರೆಸ್ ಕಾರ್ಯಕರ್ತರು ಬಿ.ಜೆ.ಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಿಜೆಪಿಯ ತತ್ವ ಸಿದ್ದಾಂತ ಮೆಚ್ಚಿ ಕಾಂಗ್ರೆಸ್‌ನ ಹೋಬಳಿ ಅಧ್ಯಕ್ಷ ಹಾಗೂ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಭುವನೇಂದ್ರ ತಮ್ಮ 200 ಜನ ಬೆಂಬಲಿಗರೊಂದಿಗೆ ಬಿ.ಜೆ.ಪಿ. ಸೇರ್ಪಡೆಯಾದರು. ಮಡಿಕೇರಿ ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಬಿಜೆಪಿ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.