ಮಡಿಕೇರಿ: ವಾಹನ ಸಾಲ ಮಂಜೂರಾತಿಗೆ ಸಂಬಂಧಿಸಿದಂತೆ ಮಡಿಕೇರಿಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸಿಬ್ಬಂದಿಯೋರ್ವರು ವ್ಯಕ್ತಿಯೋರ್ವರಿಂದ ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸೋಮವಾರಪೇಟೆಯ ನಿವಾಸಿಯೋರ್ವರಿಗೆ ವಾಹನ ಸಾಲಕ್ಕೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸಿಬ್ಬಂದಿಯೋರ್ವರು ಹತ್ತು ಸಾವಿರ ರೂ.ಗಳನ್ನು ಸ್ವೀಕರಿಸುತ್ತಿದ್ದ ಸಂದರ್ಭ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.