ಸೋಮವಾರಪೇಟೆ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗೌಡಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೊಳಪಡುವ ಚಿಕ್ಕಾರ ಗ್ರಾಮದಲ್ಲಿ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಕೃಷಿಫಸಲು ಸಂಪೂರ್ಣ ನಾಶವಾಗಿದೆ.
ಈ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಗುಡುಗು, ಮಿಂಚು ಸಹಿತ ಸುಮಾರು ಐದು ಇಂಚಿಗೂ ಅಧಿಕ ಮಳೆ ಸುರಿದ ಪರಿಣಾಮ ಕೃಷಿಫಸಲುಗಳು ಸಂಪೂರ್ಣ ನಾಶವಾಗಿದ್ದು, ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ, ಕೃಷಿಕರಿಗೆ ಸೂಕ್ತ ಪರಿಹಾರ ನೀಡುವಂತೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.