ಕೂಡಿಗೆ : ಕೂಡಿಗೆ ಸಮೀಪದ ಬಸವತೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುದುವಾರ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಏರ್ಪಡಿಸಲಾಯಿತು. ಜಿಲ್ಲಾಡಳಿತ, ಕೊಡಗು ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆದತ್ವ ನಿಯಂತ್ರಣ ವಿಭಾಗ ಮಡಿಕೇರಿ ಕೊಡಗು ಜಿಲ್ಲೆ ಇವರ ಸಹಭಾಗಿತ್ವದಲ್ಲಿ ಕೂಡಿಗೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಬುಧವಾರ ಏರ್ಪಡಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೂಡಮಂಗಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಭಾಸ್ಕರ ನಾಯಕ್, ಆರೋಗ್ಯ ಕಾಪಾಡುವ ಉದ್ದೇಶದಿಂದ ನಮ್ಮ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು, ಕಣ್ಣಿನ ತಪಾಸಣೆಯನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯ ಫಿಲೋಮಿನಾ ಮಾತನಾಡಿ, ಕೂಡಿಗೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಕಣ್ಣಿನ ಆರೋಗ್ಯ ತಪಾಸಣೆ, ಶಿಬಿರವನ್ನು ಏರ್ಪಡಿಸಿದ್ದು ಇದರ ಶಿಬಿರವನ್ನು ಯಶಸ್ವಿಯಾಗಿ ಜರುಗಿದೆ ಎಂದು ತಿಳಿಸಿದರು. ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಧಿಕಾರಿ ತೇಜಸ್ವಿನಿ ಮಾತನಾಡಿ ನಮ್ಮ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಏರ್ಪಡಿಸಿದ್ದು ಇದನ್ನು ಪ್ರತಿಯೊಬ್ಬರು ಸದುಪಯೋಗ ಪಡೆದುಕೊಂಡು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸುವ ನಿಟ್ಟಿನಲ್ಲಿ ಈ ಶಿಬಿರವನ್ನು ಆಯೋಜಿಸಲಾಗಿದೆ, ಮೊದಲು ಪ್ರತಿಯೊಬ್ಬರಿಗೂ ಬಿಪಿ ಮತ್ತು ಶುಗರ್ ಪರೀಕ್ಷಿಸಿ ನಂತರ ಕಣ್ಣಿನ ತಪಾಸಣೆಯನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.
ವರದಿ : ಕೆ ಆರ್ ಗಣೇಶ್ ಕೂಡಿಗೆ